ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ಗೌಡ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಆಯ್ಕೆ

ಬೆಳ್ತಂಗಡಿ ತಾಲೂಕಿನ ಬಿಜೆಪಿಯ ಯುವ ಮೋರ್ಚಾದ ಅಧ್ಯಕ್ಷರಾಗಿ ಯಶವಂತ ಗೌಡ ಬೆಳಾಲು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಗುರುವಾಯನಕೆರೆಯವರು ಆಯ್ಕೆಯಾಗಿದ್ದಾರೆ.

ಯಶವಂತ ಗೌಡ ಬೆಳಾಲು

ನಾವೂರು ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಗಣೇಶ್ ಗೌಡರವರು ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಯುವ ಮೋರ್ಚದ ಅಧ್ಯಕ್ಷರಾಗಿ ಆಯ್ಕೆಯಾದ ಯಶವಂತ ಗೌಡ ಬೆಳಾಲು ರವರು ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ ಯುವ ಘಟಕದ ಅಧ್ಯಕ್ಷರಾಗಿ ಹಾಗೆ ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಕುಲಾಲ್ ಗುರುವಾಯನಕೆರೆ ರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Leave A Reply

Your email address will not be published.