ಮಾಡಾವು 110 ಕೆವಿ ಸಬ್ ಸ್ಟೇಶನ್ | ಶಾಸಕ ಅಂಗಾರ ಅವರಿಂದ ಪ್ರಾಯೋಗಿಕ ಚಾಲನೆ

ಪುತ್ತೂರು: 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆಯೊಂದು ಪ್ರಾಯೋಗಿಕವಾಗಿ ಶನಿವಾರ ಚಾಲನೆಗೊಂಡಿದೆ. ಸುಳ್ಯ ಶಾಸಕ ಎಸ್.ಅಂಗಾರ ಅವರು ಶನಿವಾರ ಚಾಲನೆ ನೀಡಿದರು.

ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಕೆಲವು ದಿನಗಳ ಹಿಂದೆ ಪೂರ್ಣಗೊಂಡಿತ್ತು. ಇದೀಗ ಪ್ರಾಯೋಗಿಕ ಚಾಲನೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ,ಸುಳ್ಯ ತಾ.ಪಂ.ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಪುಣ್ಚಪ್ಪಾಡಿ ಗ್ರಾಮ ವಿಕಾಸ ಅಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ,ಕೆಪಿಟಿಸಿಎಲ್ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಸಿಬಂದಿಗಳು ಹಾಜರಿದ್ದರು.

Leave A Reply

Your email address will not be published.