ಕೊರೊನಾ ಅಟ್ಟಹಾಸಕ್ಕೆ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ

ಉಡುಪಿ : ಕೋವಿಡ್ 19 ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಮುಂಬೈನಿಂದ ಕುಂದಾಪುರಕ್ಕೆ ಆಗಮಿಸಿದ್ದ ಜಪ್ತಿಯ ನಿವಾಸಿ 54 ವರ್ಷ ವ್ಯಕ್ತಿ ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇದೀಗ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ .

ಮಾರ್ಚ್ 13 ರಂದು ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯನ್ನು ಕುಂದಾಪುರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ವ್ಯಕ್ತಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇದೀಗ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು ವ್ಯಕ್ತಿ ಕೊರೊನಾ ಸೋಂಕಿನಿಂದಲೇ ಸಾವನ್ನಪ್ಪಿರುವುದು ದೃಢಪಟ್ಟಿದೆ. ಈ ಕುರಿತು ಮಣಿಪಾಲ ಕೆಎಂಸಿ ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

Leave A Reply

Your email address will not be published.