ಗ್ರಾ.ಪಂ. ಚುನಾವಣೆ ಮುಂದೂಡಿಕೆ | ಡಿ.ಸಿ.ಯಿಂದ ಆಡಳಿತ ಮಂಡಳಿ ನೇಮಕ
ಬೆಂಗಳೂರು: ಕೊರೊನ ವೈರಸ್ ಭೀತಿಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ 6012 ಗ್ರಾಮ ಪಂಚಾಯತ್ ಗಳಿದ್ದು ಇದರಲ್ಲಿ ಕೆಲವು ಪಂಚಾಯತ್ ಗಳನ್ನು ಹೊರತುಪಡಿಸಿ ಉಳಿದ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಅದಿಕಾರದ ಅವಧಿ ಜೂನ್ -ಜುಲೈರೊಳಗೆ ಅಂತ್ಯಗೊಳ್ಳಲಿದೆ. ಆದರೆ ಕೊರೊನ ವೈರಸ್ ನಿಂದ ಮುಂಜಾಗೃತ ಕ್ರಮವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಾತ್ ಚುನಾವಣೆಯನ್ನು ಆರು ತಿಂಗಳು ಮುಂದೂಡಲಾಗಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಸದ್ಯಕ್ಕೆ ಇನ್ನೂ ಆರು ತಿಂಗಳು ಚುನಾವಣೆ ನಡೆಯುವ ಸನ್ನಿವೇಶ ಕಂಡು ಬರದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಕಾಯ್ದೆ 1993 ಮತ್ತು ಗ್ರಾಮ ಪಂಚಾಯತ್ ಅಡಿಯಲ್ಲಿ ಆಡಳಿತ ಸದಸ್ಯರನ್ನು ನೇಮಕ ಮಾಡಲಾಗುವುದು. ಈಗ ಎಷ್ಟು ಸಂಖ್ಯೆಯ ಗ್ರಾಮ ಪಂಚಾಯತ್ ಸದಸ್ಯರು ಇರುತ್ತಾರೆ ಅಷ್ಟೇ ಸಂಖ್ಯೆಯಲ್ಲಿ ಆಯಾ ಗ್ರಾಮ ಪಂಚಾಯಿತಿನಲ್ಲಿ ಸದಸ್ಯರನ್ನು ಡಿಸಿಯವರು ಆಯ್ಕೆ ಮಾಡುವ ಸಂಭವ ಇರುತ್ತದೆ ಎಂದು ತಿಳಿದು ಬಂದಿದೆ.