2019-20 ಮತ್ತು 2020-21ನೇ ಸಾಲಿನ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ದಿನಾಂಕ ಮುಂದೂಡಿಕೆ

2019-20 ಮತ್ತು 2020-21ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿನ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದೂಡಲಾಗಿದೆ.

2019-20 ಮತ್ತು 2020-21ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 18 ರಿಂದ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇನ್ನೂ ಕೆಲವು ಜಿಲ್ಲೆ ಮತ್ತು ನಗರಗಳಲ್ಲಿ ಕೋವಿಡ್-19 ಸಂಬಂಧ ಲಾಕ್‌ಡೌನ್‌ ಸೀಲ್‌ಡೌನ್‌ ಕ್ವಾರಂಟೈನ್ ಮುಂದುವರೆದಿರುವುದರಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದೂಡಲಾಗಿದೆ.

ಸಾರಿಗೆ ವ್ಯವಸ್ಥೆ ಮತ್ತು ಸೈಬರ್ ಕೆಫೆಗಳು ಸರಿಯಾಗಿ ಲಭ್ಯವಿಲ್ಲದಿರುವುದರಿಂದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಷ್ಟಕರವಾಗುತ್ತದೆ. ಈ ಕಾರಣದಿಂದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಆಹ್ವಾನದ ದಿನಾಂಕವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪೊಲೀಸ್ ಇಲಾಖೆಯು (ಕಲ್ಯಾಣ ಕರ್ನಾಟಕ) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್- 558, (ಸಿಎಆರ್/ಡಿಎಆರ್‌) ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಕಲ್ಯಾಣ ಕರ್ನಾಟಕ) – 444, ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ)-2007, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್‌ / ಡಿಎಆರ್‌) – 1005 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ ಮೇ 18 ರಿಂದ ಜೂನ್ 16 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಅದು ಮುಂದೂಡಿಕೆಯಾಗಿದೆ.

Leave A Reply

Your email address will not be published.