ಎಸ್ ಎಸ್ ಎಲ್ ಸಿ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಮುಂದೂಡಲ್ವಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವುದಾಗಿ ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟ ಮಾಡಿದ್ದರು. ಜೂನ್ 25ರಿಂದ ಜುಲೈ.4ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಜೂನ್ 18ಕ್ಕೆ ನಡೆಸಲಾಗುತ್ತದೆ ಎಂಬುದಾಗಿ ತಿಳಿಸಿದ್ದರು. ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯಾ ವಿಷಯವಾರು ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ಈ ಕೆಳಗಿನಂತೆ ವಿಷಯವಾರು ಪರೀಕ್ಷಾ ದಿನಾಂಕ ನಿಗಧಿ ಪಡಿಸಲಾಗಿದೆ.

ಹೀಗಿದೆ ವಿಷಯವಾರು ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪಟ್ಟಿ:

25-06-2020ರ ಗುರುವಾರ -ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ.
26-06-2020ರ ಶುಕ್ರವಾರ -ಕೋರ್ ವಿಷಯಗಳಾದ ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಮತ್ತು ಅರ್ಥ ಶಾಸ್ತ್ರ
27-06-2020ರ ಶನಿವಾರ – ಕೋರ್ ವಿಷಯಗಳಾದಂತ ಗಣಿತ, ಸಮಾಜ ಶಾಸ್ತ್ರ
29-06-2020ರ ಸೋಮವಾರ -ಕೋರ್ ವಿಷಯ – ವಿಜ್ಞಾನ, ರಾಜ್ಯ ಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
01-07-2020ರ ಬುಧವಾರ – ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ – ಸಮಾಜ ವಿಜ್ಞಾನ
02-07-2020ರ ಗುರುವಾರ – ಬೆಳಿಗ್ಗೆ 10.30ರಿಂದ 1.45ರವರೆಗೆ – ಪ್ರಥಮ ಭಾಷೆಗಳಾದಂತ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ.
03-07-2020ರ ಶುಕ್ರವಾರ – ಬೆಳಿಗ್ಗೆ 10.30ರಿಂದ 1.30ರವರೆಗೆ – ತೃತೀಯ ಭಾಷೆಗಳಾದಂತ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
03-07-2020ರ ಶುಕ್ರವಾರ – ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.45ರವರೆಗೆ – ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳಾದ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

Leave A Reply

Your email address will not be published.