ಪುತ್ತೂರು | ವಿವೇಕಾನಂದ ಕಾಲೇಜು ವತಿಯಿಂದ ವಿದ್ಯಾರ್ಥಿಗಳಿಗಾಗಿ ಉಚಿತ ಆನ್ ಲೈನ್ ಕ್ಲಾಸ್ ಆರಂಭ
ಪ್ರಥಮ ಪಿ.ಯು.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ…..ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪ್ರಥಮ ಪಿಯು ಉತ್ತೀರ್ಣರಾಗಿ ದ್ವಿತೀಯ ಪಿಯು ಪ್ರವೇಶ ಪಡೆಯಲಿರುವ ವಿಜ್ಞಾನ ,ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಆನ್ಲೈನ್ ಕೋಚಿಂಗ್
ಪ್ರಾರಂಭಗೊಂಡಿದೆ. ಇದು ಕೇವಲ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುವ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.
ತರಗತಿ ಸಮಯದ ವಿವರ:
- ಬೆಳಿಗ್ಗೆ 9.30 – 11.00 ವಾಣಿಜ್ಯ ವಿದ್ಯಾರ್ಥಿಗಳಿಗೆ ತರಗತಿ.
- ಬೆಳಿಗ್ಗೆ 11.00 -1.00 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯಲಿವೆ.
- ಅಪರಾಹ್ನ 3 ರಿಂದ 4 ಗಂಟೆಯವರೆಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಗೆ ಬೆಳಗ್ಗಿನ ತರಗತಿಗಳ ಮರುಪ್ರಸಾರವೂ ನಡೆಯಲಿದೆ
- ಸಂಜೆ 7ರಿಂದ -9ರವರೆಗೆ ವಿಜ್ಞಾನ ವಿದ್ಯಾರ್ಥಿಗಳಿಗೆ ಬೆಳಗಿನ ತರಗತಿಗಳ ಮರುಪ್ರಸಾರವೂ ನಡೆಯಲಿದೆ.
ಕಾರಣಾಂತರಗಳಿಂದ ತರಗತಿಗಳು ವಿಳಂಬವಾಗುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಈ ಉಚಿತ ತರಗತಿಗಳ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ
9902194905,9731640407 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
YouTube ನಲ್ಲಿ Vpuc Puttur ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ.ಲಾಕ್ ಡೌನ್ ಸಮಯದಲ್ಲಿ ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಆನ್ ಲೈನ್ ತರಗತಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: