ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ಗಳ ಅಗತ್ಯವಿಲ್ಲ: ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

ಬೆಂಗಳೂರು: ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆಯಾಗಿದೆ. ಇದರಿಂದಾಗಿ ಅಂತರ್ ಜಿಲ್ಲಾ ಪ್ರಯಾಣ ಬೆಳೆಸುವವರಿಗೆ ಪಾಸ್‍ಗಳ ಅಗತ್ಯವಿಲ್ಲ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಈ ಕುರಿತು ಅವರು ಟ್ವೀಟ್ ಮಾಡಿದ್ದು, ಅಂತರ್ ಜಿಲ್ಲಾ ಪಯಾಣಕ್ಕೆ ಪಾಸ್ ಪಡೆದುಕೊಳ್ಳುವ ಅಗತ್ಯ ಇಲ್ಲ. ಅಲ್ಲದೆ, ಸಂಜೆ 7 ಗಂಟೆಯಿಂದ ಬೆಳಗ್ಗೆ 7ಗಂಟೆವರೆಗೆ ಲಾಕ್ ಡೌನ್ ನಿಯಮ ಜಾರಿಯಲ್ಲಿರುತ್ತದೆ. ಇದರಿಂದಾಗಿ ಅನಿವಾರ್ಯವಾದರೆ ಮಾತ್ರ ಪ್ರಯಾಣ ಬೆಳೆಸಿ ಎಂದು ಸಲಹೆ ನೀಡಿದ್ದಾರೆ.

Leave A Reply

Your email address will not be published.