ಕಡಬ | ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನೇಣಿಗೆ ಶರಣು

ಕಡಬ: ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ.

ಕೊಂಬಾರುಗದ್ದೆ ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ನಂದನ್(16 ವರ್ಷ) ಎಂಬವನು ಆತ್ಮಹತ್ಯೆಗೆ ಶರಣಾದವನು. ನಂದನ್ ಹತ್ತನೆ ತರಗತಿಯಲ್ಲಿ ಓದುತ್ತಿದ್ದು ಇಂದು ಮುಂಜಾನೆ ತನ್ನ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷೆ ಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಸಲಾಗಿದೆ.

Leave A Reply

Your email address will not be published.