ನೆಟ್ಟಣ | ಹೊಟೇಲ್‌ನಲ್ಲಿ ಮದ್ಯ ಮಾರಾಟ |ಅಬಕಾರಿ ಇಲಾಖೆ ದಾಳಿ

ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಹೋಟೆಲ್ ಒಂದಕ್ಕೆ ಅಬಕಾರಿ ಇಲಾಖಾಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚಿದ್ದಾರೆ.ಆರೋಪಿಯು ಪರಾರಿಯಾಗಿದ್ದು,ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ

ಇಲ್ಲಿನ ನೆಟ್ಟಣ ಪೇಟೆಯಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್ ಅಂಬಾಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಅಬಕಾರಿ ನಿರೀಕ್ಷಕಿ ಸುಜಾತ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಸುಮಾರು 2.52 ಲೀಟರ್ ಮದ್ಯವನ್ನು ವಶಕ್ಕೆ ತೆಗೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ ವಿಬಿನ್ ಎಂಬಾತ ತಪ್ಪಿಸಿಕೊಂಡಿದ್ದಾನೆ.ಮದ್ಯ ಮಾತ್ರವಲ್ಲದೆ ಈ ಹೋಟೆಲ್ ನಲ್ಲಿ ಅಕ್ರಮವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬುದಾಗಿ ಅಬಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಅಬಕಾರಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

Leave A Reply

Your email address will not be published.