ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿಗೂ ಅಂಟಿದ ಕೋರೋನಾ ನಂಟು

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿಯಾದ 38 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ -19 ಸೋಂಕು ದೃಢವಾಗಿದೆ. ಆ ಹಿನ್ನೆಲೆಯಲ್ಲಿ ಶಿರ್ಲಾಲಿನ ಮಜಲುಪಲ್ಕೆ ಪ್ರದೇಶದ ಒಟ್ಟು ಏಳು ಮನೆಗಳನ್ನು ಕಂಟೈನ್ಮೆಂಟ್ ವಲಯವೆಂದು ಗುರುತಿಸಲಾಗಿದೆ.

 

ಮಹಿಳೆಯು ಶಿರ್ಲಾಲಿನ ಮಜಲುಪಲ್ಕೆಯಿಂದ ಕನ್ಯಾಡಿ-1 ಪಡ್ಪು ಎಂಬಲ್ಲಿಯ ಅವರ ಸಂಬಂಧಿಕರ ಮನೆಗೆ ತೆರಳಿದ್ದು ಈ ಸಂದರ್ಭದಲ್ಲಿ ಸ್ಥಳೀಯರು ತಾಲೂಕು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಬಳಿಕ ಅಲ್ಲಿಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ ಆ ಮನೆಯ ಎಲ್ಲರನ್ನೂ ಕೂಡ ಹೋಮ್ ಕ್ವಾರಂಟೈನ್ ಮಾಡಲಾಗಿದೆ.

ಮಹಿಳೆಗೆ ಮೊನ್ನೆ ಕೋವಿಡ್ -19 ಸೋಂಕಿನ ಲಕ್ಷಣಗಳ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯನ್ನು ಇದೀಗ ವೆನ್ ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ.
ಶಾಸಕ ಹರೀಶ್ ಪೂಂಜ, ತಹಶೀಲ್ದಾರ್, ಆರೋಗ್ಯಾಧಿಕಾರಿ ಡಾ.ಕಲಾಮಧು, ಅಳದಂಗಡಿ ಆಸ್ಪತ್ರೆ ವೈದ್ಯೆ ಡಾ.ಚೈತ್ರಾ, ವೇಣೂರು ಎಸ್ ಐ ಲೋಲಾಕ್ಷ, ಎಎಸ್ ಐ ಜಯಪೂಜಾರಿ ಪೊಲೀಸ್ ಸಿಬ್ಬಂದಿ ಕೃಷ್ಣ ಸ್ಥಳಕ್ಕೆ ತಾ.ಪಂ. ಸದಸ್ಯ ಜಯಶೀಲಾ, ಪಿಡಿಒ ರಾಜು, ಗಣಪತಿ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.