ದ.ಕ 2 , ಉಡುಪಿ 5 ಮಂದಿಗೆ ಕೊರೊನಾ ಪಾಸಿಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಸರಣಿ ಮುಂದುವರೆದಿದ್ದು, ಶನಿವಾರ ಮತ್ತೆ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ಶನಿವಾರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ದ.ಕ.ದ ಇಬ್ಬರಿಗೆ ಸೋಂಕು ಇರುವುದು ದೃಢವಾಗಿದೆ. ಉಸಿರಾಟದ ಸಮಸ್ಯೆ ಇದ್ದ ಬೆಳ್ತಂಗಡಿ ಶಿರ್ಲಾಲು ಮೂಲದ 41 ವರ್ಷದ ಮಹಿಳೆ ಮತ್ತು ಮಹಾರಾಷ್ಟ್ರ ದಿಂದ ಆಗಮಿಸಿ ಕ್ವಾರಂಟೈನ್ ನಲ್ಲಿ ಇದ್ದ 30 ವರ್ಷದ ಯುವಕನಿಗೆ ಕೊರೋನಾ ಕಾಣಿಸಿಕೊಂಡಿದೆ. ಈ ಮೂಲಕ ದ.ಕ.ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 65 ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 5 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಪ್ರಕರಣಗಳು 55ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಅವರು ತಿಳಿಸಿದ್ದಾರೆ.

ಸೋಂಕಿತರ ಪೈಕಿ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರಿದ್ದಾರೆ. ಅಲ್ಲದೇ ನಾಲ್ವರು ಮುಂಬೈನಿಂದ ಬಂದಿದ್ದರೆ, ದುಬೈನಿಂದ ಆಗಮಿಸಿದ ಒಬ್ಬರಿಗೆ ಸೋಂಕು ತಗುಲಿದೆ. ಎಲ್ಲರನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ.

ದುಬೈನಿಂದ ಬಂದ 37ರ ಹರೆಯದ ಯುವಕ, ಮುಂಬೈನಿಂದ ಆಗಮಿಸಿದ 55 ವರ್ಷ, 31 ವರ್ಷ ಪ್ರಾಯದ ಯುವಕನಿಗೆ ಸೋಂಕು ದೃಢಪಟ್ಟಿದೆ. ಇವರ ಜೊತೆ 48 ಮತ್ತು 34ರ ಹರೆಯದ ಮಹಿಳೆಯರಿಗೆ ಕೋವಿಡ್ – 19 ಸೋಂಕು ಖಚಿತಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave A Reply

Your email address will not be published.