ಪಾಣೆಮಂಗಳೂರು | ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯುವಕನೋರ್ವ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಯುವಕರ ತಂಡವೊಂದು ರಕ್ಷಿಸಲು ನದಿಗೆ ಹಾರಿ ಮಾನವೀಯತೆ ಮೆರೆದ ಘಟನೆ ಪಾಣೆ ಮಂಗಳೂರಿನಲ್ಲಿ ನಡೆದಿದೆ.

ಕಲ್ಲಡ್ಕ ಕೊಳಕೀರು ನಿವಾಸಿ ನಿಶಾಂತ್ ಪಾಣೆ ಮಂಗಳೂರು ನೇತ್ರಾವತಿ ನದಿಗೆ ಹಾರಿದರು. ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂದು ತಿಳಿದುಬಂದಿಲ್ಲ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಈದುಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದ ಸ್ಥಳೀಯ ಯುವಕರ ತಂಡ ಜಮಾಯಿಸಿದರು. ಈ ಪೈಕಿ ಈಜುಪಟುಗಳಾದ ಗೂಡಿನಬಳಿಯ ಶಮೀರ್ ಮುಹಮ್ಮದ್ ಮೊಮ್ಮು, ತೌಸೀಫ್ ಝಾಹಿದ್ ಜಾಯಿ, ಅಕ್ಕರಂಗಡಿಯ ಮುಕ್ತಾರ್ ಹಾಗೂ ಆರಿಫ್ ಹೈವೇ ಎಂಬವರು ಕ್ಷಣಮಾತ್ರದಲ್ಲಿ ನದಿಗೆ ಹಾರಿ ರಕ್ಷಿಸಿದ್ದಾರೆ.
ನದಿಯಲ್ಲಿ ಮುಳುಗಿದ್ದ ನಿಶಾಂತ್‌ನನ್ನು ಮೇಲಕ್ಕೆತ್ತಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಬಂಟ್ವಾಳ ನಗರದ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave A Reply

Your email address will not be published.