ದ.ಕ. ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್

ಮಂಗಳೂರು: ಇಂದು ಮದ್ಯಾಹ್ನದ ವೇಳೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 19 ಕೊರೊನಾ ಪಾಸಿಟಿವ್ ಬಂದಿದ್ದು, ಈ ಪೈಕಿ ಉಡುಪಿ ಜಿಲ್ಲೆಯಲ್ಲಿ 16 ಸೋಂಕಿತರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ.

ಇಂದು ಕಡಲ ತಡಿಯಲ್ಲಿ ಕಂಡು ಬಂದಿರುವ ಪ್ರಕರಣಗಳ ಮೂಲ ಮಹಾರಾಷ್ಟ್ರದ ಸಂಪರ್ಕದಿಂದ ಬಂದಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಇಂದು 69 ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.