ಹೋಮ್ ಕ್ವಾರಂಟೈನ್ ನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶ ಹಾಗೂ ಹೊರರಾಜ್ಯಗಳಿಂದ ಬಂದವರಿಗೆ ಕ್ವಾರಂಟೈನ್ ಅನಿವಾರ್ಯವಾಗಿದೆ. ಇದೀಗ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಸುಮಾರು 2 ತಿಂಗಳುಗಳ ಕಾಲ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಡಿ.ವಿ.ಸದಾನಂದ ಗೌಡರು ಇಂದು ಬೆಳಗ್ಗೆ 10.30ಕ್ಕೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಸ್ವತಃ ಕ್ವಾರಂಟೈನ್ ಗೆ ಒಳಪಡಲಿದ್ದಾರೆ.

ಕೊರೊನಾ ವಿರುದ್ದದ ಹೋರಾಟದಲ್ಲಿ ಪಾಲ್ಗೊಳ್ಳುವ ಸಚಿವರು, ಅಧಿಕಾರಿಗಳಿಗೆ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ. ಆದರೂ ಸಹ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್ ಗೆ ಒಳಪಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

Leave A Reply

Your email address will not be published.