ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದೆ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಗೊಳಿಸುವಂತೆ ರಾಜ್ಯದ ವಿವಿಧ ಸಂಘಟನೆಗಳಿಂದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕರ್ನಾಟಕ ರಾಜ್ಯ ನಿವೃತ್ತ ಶಿಕ್ಷಣ ಅಧಿಕಾರಿಗಳ ವೇದಿಕೆ,ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ,ಭಾರತ ಜ್ಞಾನ ವಿಜ್ಞಾನ ಸಮಿತಿ,ರಾಜ್ಯ ಮಹಿಳಾ ಒಕ್ಕೂಟ,ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ ಮುಂತಾದ ರಾಜ್ಯದ ವಿವಿಧ ಸಂಘಟನೆಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಇಡೀ ಜಗತ್ತೇ ಕೊರೊನಾ ಮಹಾಮಾರಿಯಿಂದ ತತ್ತರಿಸಿ ಹೋಗಿದೆ. ಇಂತಹ ತುರ್ತು ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಅಪಾಯಕಾರಿ. ವಿದ್ಯಾರ್ಥಿಗಳ ,ಶಿಕ್ಷಕರ ಹಾಗೂ ಪೋಷಕರ ಹಿತದೃಷ್ಟಿಯಿಂದ ಹತ್ತನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಈ ಸಂಘಟನೆಗಳು ಮನವಿ ಮಾಡಿವೆ.

ಸಂಘಟನೆಗಳ ಮನವಿ ಪತ್ರವನ್ನು ಇಲ್ಲಿ ಓದಬಹುದಾಗಿದೆ:ವರದಿ : ಹಸೈನಾರ್ ಜಯನಗರ

Leave A Reply

Your email address will not be published.