ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ಸಾಥ್ ಎಂದ ಶೋಭಾ | ನಿನ್ನೆ ಆತ್ಮಹತ್ಯೆ ಮಾಡಿಕೊಂಡ ಬಂಟ್ವಾಳ ನಿಶಾಂತ್ ಸಾವಿನ ಸುತ್ತ ರಾಜಕೀಯ

ಬೆಂಗಳೂರು : ತಮ್ಮ ಹೆಸರಿನಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿ, ಸಮಾಜದ ಸ್ವಾಸ್ಥ್ಯ-ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಸೇರಿಕೊಂಡಿರುವುದು ಅವರ ವಿಕೃತ ಮನಸ್ಥಿತಿಯನ್ನು ತೆರೆದಿಡುತ್ತದೆ. ಈ ರೀತಿಯ ಫೇಕ್ ನ್ಯೂಸ್ ಗಳ ಮೂಲಕ ಸಮಾಜದ ಸಾಮರಸ್ಯ ಕದಡುತ್ತಿರುವ ಎಲ್ಲಾ ಸಮಾಜ ವಿರೋಧಿಗಳಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಾನು ಈ ರೀತಿಯ ಯಾವುದೇ ಹೇಳಿಕೆ ಅಥವಾ ಟ್ವೀಟ್ ಮಾಡಿರುವುದಿಲ್ಲ, ಎಡಿಟೆಡ್ ಟ್ವೀಟನ್ನು ನನ್ನದೆಂದು ಬಿಂಬಿಸಲು ಪ್ರಯತ್ನಿಸಿರುತ್ತಾರೆ.

ಕಿಡಿಗೇಡಿಗಳ ಈ ಕೃತ್ಯಕ್ಕೆ ಸಾಥ್ ನೀಡುವ & ಸಾರ್ವಜನಿಕ ವಲಯದಲ್ಲಿ ವದಂತಿಗಳ ಮೂಲಕ ಸಾಮರಸ್ಯ-ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ @compolmlrಗೆ ಸೂಚಿಸಲಾಗಿದೆ.

ಘಟನೆಯ ವಿವರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಕೊಳಕೀರು ನಿವಾಸಿ ನಿಶಾಂತ್ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿದ್ದ. ನಿಶಾಂತ್ ಹಾರಿದ್ದನ್ನು ನೋಡಿ ರಂಜಾನ್ ಹಬ್ಬದ ಸಡಗರದಲ್ಲಿದ್ದ ಮುಸ್ಲಿಂ ಯುವಕರು, ನದಿಗೆ ಜಿಗಿದು ಆತನನ್ನು ಮೇಲೆ ತಂದು ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಶಾಂತ್ ಸಾವನ್ನಪ್ಪಿದ್ದಾನೆ.
ಆದರೆ ನಿಶಾಂತ್ ಆತ್ಮಹತ್ಯೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ.

ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಮತ್ತು ಪತ್ರಿಕೆಗಳಲ್ಲಿ ಹರಿದಾಡುತ್ತಿರುವ ಸಮಯದಲ್ಲೇ ಕೆಲ ಕಿಡಿಗೇಡಿಗಳು ಶೋಭಾ ಕರಂದ್ಲಾಜೆಯವರೇ ಟ್ವೀಟ್ ಮಾಡಿದಂತೆ ಸಾಲನ್ನು ಎಡಿಟ್ ಮಾಡಿದ್ದರು. “ಜಿಹಾದಿ ಹಿಂದೂ ಸಂಘಟನೆಯಿಂದ ಕಲ್ಲಡ್ಕದ ನಿಶಾಂತ್ ಎಂಬ ಯುವಕನ ಹತ್ಯೆ ನಡೆದಿದೆ ಎಂಬ ಮಾಹಿತಿ ಬಂದಿದೆ. ಕೂಡಲೇ ಆ ಜಿಹಾದಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ” ಎಂದು ಈ ನಕಲಿ ಟ್ವೀಟ್ ನಲ್ಲಿ ಬರೆಯಲಾಗಿತ್ತು. ಈ  ಟ್ವೀಟ್ ಗೆ ಸಂಬಂಧಿಸಿದಂತೆ ಕರಂದ್ಲಾಜೆ ಪ್ರತಿಕ್ರಿಯಿಸಿ ನಾನು ಈ ಟ್ವೀಟ್ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನನ್ನ ಹೆಸರಿನಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿ, ಸಮಾಜದ ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಟರಲ್ಲಿ ಆಗ್ರಹ ಮಾಡಿರುತ್ತೇನೆ.

Leave A Reply

Your email address will not be published.