ಕೆ‌ ಎಸ್ ಆರ್ ಟಿ ಸಿ ಬಸ್ ಚಾಲಕನನ್ನೂ ಬಿಡದ ಕಿಲ್ಲರ್ ಕೊರೊನಾ

ಬೆಂಗಳೂರು: ಕೆ‌ಎಸ್.ಆರ್.ಟಿ.ಸಿ.ಬಸ್ ಚಾಲಕನನ್ನು ಸಹಿತ ಬಿಟ್ಟಿಲ್ಲ ಈ ಕೊರೊನಾ ಸೋಂಕು. ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕರೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದರಿಂದಾಗಿ‌ ಬಸ್ ನಲ್ಲಿ ಪ್ರಯಾಣಿಸುವುದು ಕೂಡಾ‌ ಅಷ್ಟು ಕ್ಷೇಮವಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ.

ಮಾಗಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಇಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಚಾಲಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ ಇವರ ಜೊತೆಗೆ ಪ್ರಯಾಣಿಸಿದ ಎಲ್ಲರನ್ನು ತಪಾಸಣೆ ಮಾಡಲು ಸೂಚನೆ ನೀಡಲಾಗಿದೆ ಎಂದರು.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕ ಮನೆಮಾಡಿದೆ.

Leave A Reply

Your email address will not be published.