ಶಾಲಾ ಕಾಲೇಜುಗಳ ಆರಂಭದ ಬಗ್ಗೆ ಕೇಂದ್ರ ಸರ್ಕಾರದ ಸ್ಪಷ್ಟನೆ

ನವದೆಹಲಿ: ಕೇಂದ್ರ ಗೃಹ ಸಚಿವಾಲಯ ದೇಶದಲ್ಲಿ ಶಾಲೆ ಮತ್ತು ಕಾಲೇಜು ಆರಂಭಿಸಲು ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ದೇಶದಲ್ಲಿ ಶಾಲೆ ಪುನಾರಂಭ ಕುರಿತಂತೆ ದಿನಕ್ಕೊಂದು ಹೇಳಿಕೆ ಹೊರ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸ್ಪಷ್ಟನೆ ನೀಡಿದೆ.

ರೋಗದ ಸೋಂಕು ಪ್ರಕರಣ ಗರಿಷ್ಚ ಮಟ್ಟ ತಲುಪುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂದಿನ ಎರಡು ತಿಂಗಳು ಅತ್ಯಂತ ನಿರ್ಣಾಯಕವಾಗಿದೆ ಎಂದು ಕೇಂದ್ರ ಸರ್ಕಾರ ಈ ಸ್ಪಷ್ಟೀಕರಣ ನೀಡಿದೆ. ಇದರಿಂದಾಗಿ ಶೀಘ್ರದಲ್ಲಿ ದೇಶದಲ್ಲಿ ಶಾಲೆ ಮತ್ತು ಕಾಲೇಜು ಪುನಾರಂಭ ಕಷ್ಟಕರ.

ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದ್ದು, ಹಲವಾರು ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿದೆ.ಇದರಿಂದ‌ ಶೀಘ್ರದಲ್ಲಿ ಶಾಲಾ ಕಾಲೇಜುಗಳ ಪುನರಾರಂಭ ಅಸಾಧ್ಯ ಎಂದು ತಿಳಿದುಬಂದಿದೆ.

Leave A Reply

Your email address will not be published.