ಸಂಕಷ್ಟದಲ್ಲಿರುವ ರೈತರು, ಕೃಷಿ ಕೂಲಿಕಾರ್ಮಿಕರು ಹಾಗೂ ಗ್ರಾಮೀಣ ಕಸುಬುದಾರರ ಬೇಡಿಕೆ ಈಡೇರಿಸಲು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯ
ಕರೋನ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರು, ಕೃಷಿ ಕೂಲಿಕಾರ್ಮಿಕರು ಹಾಗೂ ಗ್ರಾಮೀಣ ಕಸುಬುದಾರರ ತಕ್ಷಣದ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯಸರಕಾರವನ್ನು ಒತ್ತಾಯಿಸಿ ಪುತ್ತೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಪುತ್ತೂರು ಉಪವಿಭಾಗಾಧಿಕಾರಿಗಳ ಮೂಲಕ ಒತ್ತಾಯ ಪತ್ರವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ನೀಡಲಾಯಿತು.
ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಕಸುಬುದಾರರನ್ನು ತಕ್ಷಣದ ಹಸಿವು, ನಿರುದ್ಯೋಗ, ಆರ್ಥಿಕ ದಿವಾಳಿಯಿಂದ ರಕ್ಷಿಸಲು, 20 ಬೇಡಿಕೆಗಳನ್ನು ಮುಂಡುಟ್ಟುಕೊಂಡು ರಾಷ್ಟ್ರಮಟ್ಟದಲ್ಲಿನ 200 ಸಂಘಟನೆಗಿಂತ ಹೆಚ್ಚಿನ ರೈತರು, ಕೂಲಿಕಾರರು, ಕಸುಬುದಾರರ ಸಂಘಟನೆಗಳನ್ನು ಒಳಗೊಂಡು ರಚೆನೆಯಾಗಿರುವ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಇಂದು ರಾಷ್ಟ್ರದಾದ್ಯಂತ ತಾಲ್ಲೂಕು ಜಿಲ್ಲಾಧಿಕಾರಿಗಳ ಕಚೇರಿಗಳ ಎದುರು ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಇದರ ಭಾಗವಾಗಿ ಕರ್ನಾಟಕ ರಾಜ್ಯದಲ್ಲಿ ಹೋರಾಟವನ್ನು ನಡೆಸಿ, ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿತು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾ0ಡೀಸ್, ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ, ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಭಾಗವಹಿಸಿದ್ದರು.