ಬಾರದ ಲೋಕಕ್ಕೆ ತೆರಳಿದ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿಜೇತೆ ಮೆಬಿನಾ ಮೈಕಲ್

ಮಂಡ್ಯ : ಮೆಬಿನಾ ಮೈಕಲ್ ಕನ್ನಡದ ಹೆಸರಾಂತ ರಿಯಾಲಿಟಿ ಶೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿಜೇತೆಯಾಗಿದ್ದು, ಇವರು ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದ್ದಾರೆ.

ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ ಎನ್ನಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ ಸಮೀಪ ಈ ಅಪಘಾತ ಸಂಭವಿಸಿರುವ ಕುರಿತು ಮಾಹಿತಿ ಲಭಿಸಿದ್ದು, ಈ ವೇಳೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೆಬಿನಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಾಡೆಲ್ ಆಗಿದ್ದ ಮೆಬಿನಾ ಅವರು ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ರಿಯಾಲಿಟಿ ಶೋ 4 ವಿಜೇತೆ ಆಗಿ ಹೆಸರುವಾಸಿಯಾಗಿದ್ದರು.

Leave A Reply

Your email address will not be published.