ಬೆಳ್ಳಾರೆ | ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಗೆ ಕೊರೊನಾ ದೃಢ

ಬೆಳ್ಳಾರೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

35 ವರ್ಷ ಪ್ರಾಯದ ಬ್ಯಾಂಕ್ ಉದ್ಯೋಗಿಯಾಗಿರುವ ಇವರು ಬೆಳ್ಳಾರೆಯ ದರ್ಖಾಸಿನವರಾಗಿದ್ದು, ಉದ್ಯೋಗದ ನಿಮಿತ್ತ ಮುಂಬೈಯಲ್ಲಿದ್ದರು.

ಮೇ.21ರಂದು ಊರಿಗೆ ಮರಳಿದ್ದ ಅವರನ್ನು ಬೆಳ್ಳಾರೆ ಪೇಟೆಯ ಬಳಿಯ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿರಿಸಲಾಗಿತ್ತು.

ಕೆಲದಿನಗಳ ಹಿಂದೆ ಇವರ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು,ಕೋವಿಡ್ 19 ಇರುವುದು ದೃಢಪಟ್ಟಿದೆ. ಇವರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ.

Leave A Reply

Your email address will not be published.