ಕಡಬ | ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಸಾವು

Share the Article

ಕಡಬ: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ಕಳಾರ ನಿವಾಸಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ.

ಎಂದಿನಂತೆ ನಮಾಜ್ ಮಾಡಲು ನಿಂತಿದ್ದ ಅಬ್ದುಲ್ ಖಾದರ್ ಕೂಡಲೇ ಕುಸಿದು ಬಿದ್ದಿದ್ದಾರೆ.ಈ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದ ವ್ಯಕ್ತಿಯೊಬ್ಬರು ಎಬ್ಬಿಸಲು ಹೋದಾಗ ಖಾದರ್ ಅದಾಗಲೇ ಮೃತಪಟ್ಟಿದ್ದಾರೆ.

ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply