5 ಸೋಂಕು ಪೀಡಿತ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶ ನಿರ್ಬಂಧಿಸಿ ರಾಜ್ಯ ಸರಕಾರದ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನ ಹಾಗೂ ಮೂರು ರಾಜ್ಯಗಳ ರಸ್ತೆ ಮತ್ತು ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮುಂದಿನ 15 ದಿನಗಳ ಕಾಲ ಜಾರಿಯಲ್ಲಿರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಹೇಳಿದರು.

ಗುಜರಾತ್, ಮಹಾರಾಷ್ಟ್ರ , ತಮಿಳುನಾಡು, ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಿಂದ ಕರ್ನಾಟಕದಲ್ಲಿ ಬಹಳಷ್ಟು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಳ್ಳಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.