ಪ್ರಥಮ ಹಾಗೂ ದ್ವಿತೀಯ ಪದವಿಗೆ ಪರೀಕ್ಷೆಗಳು ಇಲ್ಲ: ಕೇಂದ್ರ ಸರಕಾರ
ನವದೆಹಲಿ:ಕೊರೊನಾ ಸೋಂಕು ದೇಶವ್ಯಾಪಿ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರವು ಪ್ರಥಮ ಹಾಗೂ ದ್ವಿತೀಯ ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಿದೆ.
ಭಾರತದಾದ್ಯಂತ ಹಲವು ವಿಶ್ವವಿದ್ಯಾನಿಲಯಗಳಿದ್ದು ಎಲ್ಲ ವಿಶ್ವವಿದ್ಯಾಲಯಗಳ ಲಾಕ್ಡೌನ್ ನಂತರ ಬಾಕಿ ಉಳಿದ ಪರೀಕ್ಷೆಗಳನ್ನು ನಡೆಸದಿರಲು ತೀರ್ಮಾನಿಸಲಾಗಿದೆ.
ಆದರೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪದವಿ ಹಂತದ ಕೊನೆಯ ಪರೀಕ್ಷೆ ಮಾತ್ರ ಬಾಕಿ ಉಳಿಯುತ್ತಿದ್ದು ಹಾಗಾಗಿ ಅದನ್ನು ಮಾತ್ರ ನಡೆಸಲು ಚಿಂತಿಸಲಾಗಿದೆ.
ಪ್ರಥಮ ಹಾಗೂ ದ್ವಿತೀಯ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಅವರ ಹಿಂದಿನ ಶೈಕ್ಷಣಿಕ ಸಾಧನೆಯನ್ನು ಆಧರಿಸಿ ತೇರ್ಗಡೆ ಮಾಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.
ಪ್ರತಿಯೊಬ್ಬ ವಿದ್ಯಾರ್ಥಿಯು ಅಂತಿಮ ಪದವಿ ತರಗತಿಯ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಕುರಿತು ಯಾವುದೇ ರೀತಿಯ ಗೊಂದಲಗಳಿದ್ದರೆ ಯುಜಿಸಿ ಕಾರ್ಯಪಡೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ದೇಶದಾದ್ಯಂತ 45 ಸಾವಿರ ಉನ್ನತ ಶಿಕ್ಷಣ ಸಂಸ್ಥೆಗಳಿದ್ದು, ಕೇಂದ್ರ ಸರಕಾರದ ಈ ನಿರ್ಧಾರದಿಂದಾಗಿ ವಿದ್ಯಾರ್ಥಿಗಳು ಗೊಂದಲದ ಗೂಡಿನಿಂದ ಹೊರಬಂದಿದ್ದಾರೆ.