ಕುಕ್ಕುಜೆಯಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾ ಸೂಚನೆ
ವರದಿ : ಗೌತಮಿ ಮೊಗ್ರು
ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದ ಕುಕ್ಕುಜೆ – ಆಲಂಬ ಎಂಬಲ್ಲಿ ಮೂರು ದಿನಗಳ ಹಿಂದೆ ಕುಸಿದ ಬಿದ್ದ
ಹಳೆಯ ಸೇತುವೆಯ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ ಶಾಸಕರಾದ ಹರೀಶ್ ಪೂಂಜಾ ಅವರು ಇಲ್ಲಿ ಸಂಪರ್ಕಕ್ಕೆ ಅಡಚಣೆಯಾಗದಂತೆ ತುರ್ತಾಗಿ ತಾತ್ಕಾಲಿಕ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸುವಂತೆ
ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದ ಕುಕ್ಕುಜೆ-ಅಲಂಬ ಎಂಬಲ್ಲಿ ಸುಮಾರು 40 ವರ್ಷಗಳಷ್ಟು ಹಿಂದೆ ನಿರ್ಮಾಣವಾಗಿದ್ದ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಸೇತುವೆ ಮೂರು ದಿನಗಳ ಕುಸಿದು ಬಿದ್ದಿತ್ತು.
ಈ ಹಿನ್ನೆಲೆಯಲ್ಲಿ ಸೇತುವೆ ಮುರಿದುಬಿದ್ದ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ತುರ್ತಾಗಿ ತಾತ್ಕಾಲಿಕ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸಲು ಮುಗೆರೋಡಿ ಕನ್ಸ್ಟ್ರಕ್ಷನ್ ಅವರಿಗೆ ಸೂಚನೆ ನೀಡಲಾಯಿತು.
ಇದೇ ಸಂದರ್ಭ ಮಾತನಾಡಿದ ಶಾಸಕರು ನೂತನವಾದ ಶಾಶ್ವತ ಸೇತುವೆಗೆ ಅನುದಾನ ಮಂಜೂರುಗೊಳಿಸುವ ಭರವಸೆ ನೀಡಿದರು.
ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಿಗೆ ಕುಕ್ಕುಜೆ ನೂತನ ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲು ಮನವಿ ಮಾಡಿಕೊಂಡಿದ್ದು ಪ್ರಸ್ತುತ ಮಳೆಗಾಲ ಮುಗಿದ ಕೂಡಲೇ ಶಾಶ್ವತ ಸೇತುವೆ ನಿರ್ಮಾಣದ ಕಾಮಗಾರಿ ಆರಂಭಿಸುವ ಭರವಸೆ ನೀಡಿದರು.