ಉದ್ಯಾವರ | ಸೇತುವೆಗೆ ಬಸ್ ಡಿಕ್ಕಿ: ಇಬ್ಬರು ಗಂಭೀರ

ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪದ ಉದ್ಯಾವರದಲ್ಲಿ ಇಂದು ಬೆಳಿಗ್ಗೆ ಕೆಎಸ್ಆರ್ಟಿಸಿ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದು ಹಲವರು ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಬೆಳಿಗ್ಗೆ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಕೆಲವರು ಆರೋಪಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply

Your email address will not be published.