ಛತ್ತಿಸ್ ಘಡದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಹಿರಿಯ ನಾಯಕ ಅಜಿತ್‌ ಜೋಗಿ ವಿಧಿವಶ

ಛತ್ತಿಸ್ ಘಡದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಹಿರಿಯ ನಾಯಕ ಅಜಿತ್‌ ಜೋಗಿ ಅವರು ಇಂದು ವಿಧಿವಶರಾಗಿದ್ದಾರೆ.

74 ವರ್ಷದ ಅಜಿತ್‌ ಜೋಗಿ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಜಿತ್‌ ಜೋಗಿ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇಂದು ಅವರಿಗೆ ಎರಡು ಬಾರಿ ಹೃದಯಾಘಾತವಾಗಿದ್ದು, ಕೂಡಲೇ ರಾಯ್ಪುರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅಜಿತ್‌ ಜೋಗಿ ದೀರ್ಘ ಕಾಲದಿಂದ ಅನಾರೋಗ್ಯಕ್ಕೊಳಗಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದರು. ಅಜಿತ್‌ ಜೋಗಿ ಅವರ ನಿಧನಕ್ಕೆ ಹಲವು ರಾಜಕೀಯ ನಾಯಕರು ಶೋಕ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.