ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನಟಿ ಚಂದನಾ

ಬೆಂಗಳೂರು: ಜೂ 1, ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ವರದಿಯಾಗಿದೆ.

ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿಯಾಗುರುವ ನಟಿ ಚಂದನಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವನೆ ಮಾಡಿದ್ದ ಚಂದನಾರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಕನ್ನಡ ಕಿರುತೆರೆ, ಜಾಹೀರಾತು, ಚಲನಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುತ್ತಿದ್ದ ಚಂದನಾರವರ ಸಾವಿನ ಸುದ್ದಿ ತಿಳಿದ ಸ್ನೇಹಿತರು, ಬಂಧುಮಿತ್ರರು ಕಂಬನಿ ಮಿಡಿದಿದ್ದಾರೆ.

ಚಂದನ ಹಾಗೂ ದಿನೇಶ್ ಎಂಬಾತನನ್ನು ಕಳೆದ ಐದು ವರ್ಷಗಳಿಂದಲೂ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ ರೂ. 5 ಲಕ್ಷ ಹಣ ಪಡೆದಿದ್ದನು. ಮಾತ್ರವಲ್ಲ ದೈಹಿಕವಾಗಿ ಬಳಸಿಕೊಂಡು ಆಕೆಗೆ ಗರ್ಭಪಾತ ಮಾಡಿಸಿದ್ದಾನೆ. ನಂತರ ಮದುವೆಯಾಗುವುದಿಲ್ಲ ಎಂದು ಚಂದನಾಳಿಗೆ ಮೋಸ ಮಾಡಿದ್ದು, ಇದರಿಂದ ಮನನೊಂದು ಚಂದನ ಇಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿಷ ಸೇವನೆಯ ಸೆಲ್ಫಿ ವಿಡಿಯೋ ಮಾಡಿರುವ ಚಂದನಾ ಅವರು ತಮ್ಮ ಪ್ರಿಯಕರ ದಿನೇಶ್ ಎಂಬುವರ ಮೇಲೆ ಆರೋಪ ಮಾಡಿದ್ದಾರೆ. ಇದೀಗ ದಿನೇಶ್ ಅವರು ಸದ್ಯ ನಾಪತ್ತೆಯಾಗಿದ್ದಾರೆ.

ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖಾ ಕಾರ್ಯ ಆರಂಭವಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.