ಸಿ ಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜತೆ ಇಂದು ವಿಡಿಯೋ ಸಂವಾದ

ಬೆಂಗಳೂರು: ಜೂನ್ 2 : ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆಯಾದ ನಂತರ ನಿರ್ಮಾಣವಾಗಿರುವ ಪರಿಸ್ಥಿತಿ ಕುರಿತು ಸಿ ಎಂ ಯಡಿಯೂರಪ್ಪ ಜಿಲ್ಲೆಗಳ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜತೆ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರಿಕೆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿಎಂ ಸಲಹೆ ನೀಡಲಿದ್ದಾರೆ. ನೆರೆಯ ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಆದ್ಯತೆ ನೀಡುವ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಸಾಮಾಜಿಕ ಅಂತರ ಕಾಪಾಡುವಲ್ಲಿ ವಹಿಸುತ್ತಿರುವ ನಿರ್ಲಕ್ಷ್ಯದಿಂದ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಈ ಬಗ್ಗೆ ಗಂಭೀರ ಆರೋಪ ಕೂಡ ಕೇಳಿ ಬಂದಿದ್ದು ಇದನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಳ್ಳಲಿರುವ ಸಿ ಎಂ ಮುಂಬರುವ ದಿನಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today
Leave A Reply

Your email address will not be published.