ಜುಲೈ 1ರಂದು ಶಾಲಾರಂಭ ಇಲ್ಲ‌ |ಪೋಷಕರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ -ಸಚಿವ ಸುರೇಶ್ ಕುಮಾರ್

ಜುಲೈ 1ರಿಂದ ರಾಜ್ಯದಲ್ಲಿ ಶಾಲಾ ಆರಂಭವಾಗುವುದಿಲ್ಲ, ಇದು ಯೋಚಿತ ದಿನಾಂಕವಾಗಿದೆ. ರಾಜ್ಯದ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಪಾಲಕರ ಸಭೆ ನಡೆಸಿದ ಬಳಿಕ ಯಾವಾಗ ಶಾಲೆ ಆರಂಭಿಸಬೇಕು ಎಂದು ನಿರ್ಧರಿಸಲಾಗುವುದು.

ಜೂ.10,11,12ರೊಳಗೆ ಎಲ್ಲ ಶಾಲೆಗಳಲ್ಲಿ ಪೋಷಕರ ಸಭೆ ನಡೆಸಿ ಅಲ್ಲಿ ಬರುವ ಮಾಹಿತಿಯನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಜೂನ್ 15ರೊಳಗೆ ಸಲ್ಲಿಸಿ ನಂತರ ಶಾಲಾ ಆರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ತಿಳಿಸಿದರು.

ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರೀ ನರ್ಸರಿ,ಎಲ್ಕೆಜಿ,ಯುಕೆಜಿ ಮತ್ತು 1 ಮತ್ತು 2ನೇ ತರಗತಿಯ ಮಕ್ಕಳಿಗೆ ಶಾಲಾ ಆರಂಭದ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ.ಸಧ್ಯಕ್ಕೆ ಶಾಲೆಗಳನ್ನು ಆರಂಭಿಸದಂತೆ ಬಹುತೇಕ ಜನರು ತಮ್ಮ ಅಭಿಪ್ರಾಯವನ್ನು ಸಹ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಕ್ತಪಡಿಸಿದ್ದಾರೆ.ಇದನ್ನು ಗಮನಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕೊರೋನಾ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯ ಮೇಲೆ ಹೆಚ್ಚು ಪರಿಣಾಮ ಬೀರಿದೆ.ಮುಂದಿನ ದಿನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠವನ್ನು ಹೇಗೆ ಹೇಳಬೇಕು,ಮಕ್ಕಳಿಗೆ ಸುರಕ್ಷತೆ ಹೇಗೆ ಎಂಬ ಇತ್ಯಾದಿ ವಿಷಯಗಳ ಕುರಿತು ಸಮಗ್ರ ಮಾಹಿತಿಯನ್ನು ಕಲೆ ಹಾಕಿಕೊಂಡು ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.

Leave A Reply

Your email address will not be published.