ಜೂ.4‌ | ಸವಣೂರು, ನೆಲ್ಯಾಡಿ, ಕಡಬ, ಸುಬ್ರಹ್ಮಣ್ಯ ಉಪ ಕೇಂದ್ರದಲ್ಲಿ ವಿದ್ಯುತ್ ನಿಲುಗಡೆ

ಪುತ್ತೂರು: 33ಕೆವಿ ಪುತ್ತೂರು-ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಾಗೂ 33ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.4ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 33/11ಕೆವಿ ಸವಣೂರು, ನೆಲ್ಯಾಡಿ, ಕಡಬ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಬೇಕೆಂದು ಪ್ರಕಟಣೆ ತಿಳಿಸಿದೆ.

Leave A Reply

Your email address will not be published.