ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷಾ ಅಭ್ಯರ್ಥಿಗಳಿಗೆ ಆನ್ ಲೈನ್ ತರಗತಿ
ಬೆಂಗಳೂರು: ಜೂನ್ 4, ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕೆ ಪೂರಕ ಸಿದ್ಧತೆಗಳನ್ನು ಶಿಕ್ಷಣ ಇಲಾಖೆ ಕೈಗೊಳ್ಳಲಾಗುತ್ತಿದೆ.
ಈ ಮಧ್ಯೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮಹತ್ವದ ಸೂಚನೆಯನ್ನು ಹೊರಡಿಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್ ಲೈನ್ ತರಗತಿ ನಡೆಸಲು ನಿರ್ದೇಶಿಸಿದ್ದಾರೆ.
ಕಳೆದ ಮೂರು ತಿಂಗಳ ಅಂತರದಿಂದಾಗಿ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುವ ಕಾರಣ ಆನ್ಲೈನ್ ಮೂಲಕ ಪುನರ್ಮನನ ತರಗತಿ ನಡೆಸಬೇಕೆಂದು ಸೂಚಿಸಲಾಗಿದ್ದು, ಈ ಕುರಿತಂತೆ ರಾಜ್ಯದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಇಂಗ್ಲಿಷ್ ಉಪನ್ಯಾಸಕರು ವಿಶೇಷ ಗಮನ ಹರಿಸಬೇಕೆಂದು ತಿಳಿಸಲಾಗಿದೆ.
ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೆ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಇದಾಗಿದೆ.
ಇದು ಕೇವಲ ತಾತ್ಕಾಲಿಕ ಪಟ್ಟಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ತಿದ್ದುಪಡಿಗಳು ಇದ್ದರೆ ಸಂಬಂಧ ಪಟ್ಟ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ತಿದ್ದುಪಡಿಗೆ ಜೂನ್ 5ರವೆರೆಗೆ ಅವಕಾಶ ಕಲ್ಪಿಸಲಾಗಿದೆ.