ಕಡಬದ ವ್ಯಕ್ತಿ ಆಳದಪದವಿನಲ್ಲಿ ನೇಣಿಗೆ ಶರಣು

ಕಡಬ: ಕುಟ್ರುಪಾಡಿ ಗ್ರಾಮದ ಮುಳಿಯ ನಿವಾಸಿ ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ಆಳದಪದವು ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕುಟ್ರುಪಾಡಿ ಗ್ರಾಮದ ಮುಳಿಯ ಬಾಲಕೃಷ್ಣ ಶೆಟ್ಟಿ ಎಂಬವರ ಪುತ್ರ ನವೀನ್ ಶೆಟ್ಟಿಯವರು ಕಳೆದ ಹಲವು ವರ್ಷಗಳಿಂದ ಆಳದಪದವಿನಲ್ಲಿ ವಾಸವಿದ್ದರು. ಇವರ ಪತ್ನಿ ಮಕ್ಕಳು ಕಳೆದ ಶನಿವಾರ ಅವರ ತಾಯಿ ಮನೆಗೆ ತೆರಳಿದ ಸಂದರ್ಭ ಮನೆಯಲ್ಲಿ ಓರ್ವರೇ ಇದ್ದ ಇವರು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಅವರ ಮೃತದೇಹವನ್ನು ತುಂಬೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿ ಬಳಿಕ ಮುಳಿಯ ಮನೆಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗಿದೆ.

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.