ರೈಲು ಡಿಕ್ಕಿ ಹೊಡೆದು ಸಾವು ಶಂಕೆ , ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

Share the Article

ಯುವಕನೋರ್ವನ ಮೃತದೇಹ ಛಿದ್ರಗೊಂಡ ಸ್ಥಿತಿಯಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ಬಳಿ ರವಿವಾರ ಮುಂಜಾನೆ ಪತ್ತೆಯಾಗಿದೆ.

ಶನಿವಾರ ರಾತ್ರಿ ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ರೈಲ್ವೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತನನ್ನು ಸ್ಥಳೀಯ ನಿವಾಸಿ ಎನ್ನಲಾಗುತ್ತಿದ್ದರೂ ಇನ್ನೂ ಸ್ಪಷ್ಟ ಗುರುತು ಪತ್ತೆ ಆಗಿಲ್ಲ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply