ಸಿಡಿ ಲೇಡಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್  |  ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಳ್ಳಲಾಗಿತ್ತು ಎಂದು ಸ್ಪೋಟಕ ಹೇಳಿಕೆ ಕೊಟ್ಟ ಸಿಡಿ ಹುಡುಗಿ !

ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಬಹುದೊಡ್ಡ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದ್ದು ನನ್ನನ್ನು ಹನಿಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಸಿಡಿ ಯುವತಿ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಈ ರೀತಿಯ ವರದಿಗಳನ್ನು ದೃಶ್ಯ ಮಾಧ್ಯಮಗಳು ಬಿತ್ತರಿಸುತ್ತಿವೆ.

ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ನರೇಶ್ ಮತ್ತು ಶ್ರವಣ್ ನನ್ನನ್ನು ಬಳಸಿಕೊಂಡು ಹನಿಟ್ರ್ಯಾಪ್ ಕೃತ್ಯ ಎಸಗಿದ್ದಾರೆ ಎಂದು ಎಸ್ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಇದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ.

” ನರೇಶ್ ಮತ್ತು ಶ್ರವಣ್ ನನ್ನನ್ನು ಹನಿಟ್ರ್ಯಾಪ್ ಮಾಡಲು ಬಳಸಿಕೊಂಡರು. ಆ ಕಾರಣಕ್ಕಾಗಿಯೇ ಅವರು ಹೇಳಿದಂತೆ ನಾನು ಕೇಳಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಪೂರ್ಣ ಪ್ರಮಾಣದ ಸತ್ಯ ಅಲ್ಲ. ಇವರಿಬ್ಬರ ಒತ್ತಡದಿಂದಾಗಿ ನಾನು ಈ ಹಿಂದೆ ಹೇಳಿಕೆಗಳನ್ನು ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಮುಂದೆ ಸಿಡಿ ಯುವತಿ ಹೇಳಿದ್ದು ಇದನ್ನು ತನಿಖಾಧಿಕಾರಿಗಳು ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ. 

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಡಿ ಯುವತಿ ಪರ ವಕೀಲರು, ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ. ಮಾಧ್ಯಮಗಳಲ್ಲಿ ವರದಿ ನೋಡಿ ಶಾಕ್ ಆಯಿತು. ಯುವತಿ ಯಾವುದೇ ತನ್ನ ನಿಲುವಿಗೆ ವಿರುದ್ಧವಾಗಿರುವ ಹೇಳಿಕೆಯನ್ನು ನೀಡಿಲ್ಲ ಎಂದಿದ್ದಾರ

Leave A Reply

Your email address will not be published.