ದ.ಕ.ಜಿಲ್ಲೆಯಲ್ಲಿ ಮಂಗಳವಾರ 142 ಮಂದಿಗೆ ಕೊರೋನ ದೃಢ

Share the Article

ದ.ಕ.ಜಿಲ್ಲೆಯಲ್ಲಿ ಮಂಗಳವಾರ 142 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 37,000 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಮಂಗಳವಾರ 76 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 35,148 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು,ಜಿಲ್ಲೆಯಲ್ಲಿ ಇಲ್ಲಿಯವರೆಗೆ 6,68,999 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 6,31,999 ಮಂದಿಯ ವರದಿ ನೆಗೆಟಿವ್ ಬಂದಿದೆ.

ಜಿಲ್ಲೆಯಲ್ಲಿ ಈವರೆಗೆ 743 ಮಂದಿ ಕೊರೋನಕ್ಕೆ ಬಲಿಯಾಗಿದ್ದು, ಜಿಲ್ಲೆಯಲ್ಲಿ 11 ಸಕ್ರಿಯ ಪ್ರಕರಣವಿದೆ ಎಂದು ಇಲಾಖೆ ಮಾಹಿತಿ ತಿಳಿಸಿದೆ.

Leave A Reply