Ad Widget

ದ.ಕ.ಜಿಲ್ಲೆಯಲ್ಲಿ ಇಂದು 166 ಜನರಿಗೆ ಕೊರೊನಾ

ಮಂಗಳೂರು: ಜಿಲ್ಲೆಯಲ್ಲಿಂದು 166 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 37,306ಕ್ಕೆ ಏರಿಕೆಯಾಗಿದೆ.

ಗುರುವಾರ 68 ಜನ  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 35,313ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 741 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಕರ್ನಾಟಕದಲ್ಲಿ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದ್ದು ಇದೇ ಮೊದಲ ಬಾರಿಗೆ 14,738 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 66 ಜನ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 13,112ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 10,497 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,12,521ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 30 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Ad Widget Ad Widget Ad Widget
Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: