Ad Widget

ಮಂಗಳೂರು: ಆದಾಯ ತೆರಿಗೆ ಇಲಾಖೆಯ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್; ದಾಖಲೆ ಪತ್ರಗಳು ಬೆಂಕಿಗಾಹುತಿ

ಮಂಗಳೂರಿನ ಅತ್ತಾವರದಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ಗುರುವಾರ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ದಾಖಲೆ ಪತ್ರಗಳು ಸುಟ್ಟು ಹೋಗಿವೆ.

ಇದರಿಂದ ಕಚೇರಿಯ ಅಮೂಲ್ಯ ದಾಖಲೆಪತ್ರಗಳ ಸಹಿತ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ.

Ad Widget Ad Widget Ad Widget

ಐಟಿ ಕಟ್ಟಡದ ಮೂರನೆ ಮಹಡಿಯಲ್ಲಿರುವ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿತು. ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರದ ಅಗ್ನಿಶಾಮದ ದಳದ ಸಿಬ್ಬಂದಿ ವರ್ಗವು ಸುಮಾರು ಒಂದೂವರೆ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

ಆದರೆ ಐಟಿ ಕಚೇರಿಯ ದಾಖಲೆಪತ್ರಗಳು ಸುಟ್ಟು ಭಸ್ಮವಾಗಿದೆ. ಮೇಜು, ಕುರ್ಚಿ,ಫ್ಯಾನುಗಳಿಗೆ ಹಾನಿಯಾಗಿದೆ.

Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: