ರಾಜ್ಯದಲ್ಲಿ 144 ಸೆಕ್ಷನ್ ಜಾರಿಗೆ ಸಲಹಾ ಸಮಿತಿ ಶಿಫಾರಸ್ಸು | ಮತ್ತೆ ಬೀಳುತ್ತಾ ಲಾಕ್
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನ ಸೋಂಕು ತಡೆಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು,ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಪ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಈ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದ ಏಳು ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಪ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ಕಠಿಣ ನೈಟ್ ಕರ್ಪ್ಯೂ ಮಾಡುವಂತೆ ಸಲಹೆ ನೀಡಲಾಗಿದೆ ಎಂದು ವರದಿಯಾಗಿದೆ.
ಕೊರೊನ ಸೋಂಕು ನಿಯಂತ್ರಣಕ್ಕೆ ಬಾರದಿದ್ದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ.