ಕೊಕ್ಕಡ ಸೌತಡ್ಕದ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ | ಇಬ್ಬರಿಗೆ ಗಂಭೀರ ಗಾಯ

ಇಂದು ಸಂಜೆ ಕೊಕ್ಕಡ ಸಮೀಪ ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಕೊಕ್ಕಡದ ಸೌತಡ್ಕ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಟಿಪ್ಪರ್ ಚಾಲಕ ಟಿಪ್ಪರ್ ಅನ್ನು ಗುಡ್ಡದತ್ತ ತಿರುಗಿಸಿ ಹೆಚ್ಚಿನ ಅಪಾಯವನ್ನು ತಪ್ಪಿಸಿದ್ದಾರೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರವಾಹನದ ಮುಂಭಾಗ ಜಖಂಗೊಂಡಿದ್ದು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

Leave A Reply

Your email address will not be published.