ಜಿ.ಪಂ.,ತಾ.ಪಂ ಚುನಾವಣೆ ಮುಂದೂಡಲು ಚಿಂತನೆ -ಸಚಿವ ಈಶ್ವರಪ್ಪ

       

ಕೋವಿಡ್ ಸೋಂಕು  ಏರುತ್ತಿರುವ ಹಿನ್ನೆಲೆಯಲ್ಲಿ  ಜಿ.ಪಂ, ತಾ.ಪಂ ಚುನಾವಣೆ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಕೇಳಿಬರುತ್ತಿರುವುದರಿಂದ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು ಬಳಿಕ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆದರೆ 3.5ಕೋಟಿ ಜನ ಇದರಲ್ಲಿ ಭಾಗಿಯಾಗಬೇಕಾಗುತ್ತದೆ. ಹಾಗಾಗಿ ಚುನಾವಣೆ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿಬರುತ್ತಿದೆ.

ಈ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಚುನಾವಣಾ ಆಯೋಗಕ್ಕೆ ಕಳಿಸಲಾಗುವುದು,ಅವಧಿ ಮುಗಿದ ಜಿಪಂ, ತಾಪಂಗೆ ಆಡಳಿತಾಧಿಕಾರಿ ನೇಮಕ ಮಾಡುವ ಚಿಂತನೆ ನಡೆಸಲಾಗಿದೆ ಎಂದರು.

Leave A Reply

Your email address will not be published.