ಕೊರೊನಾ ಲಾಕ್‌ಡೌನ್ ಹಿನ್ನೆಲೆ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಇಳಿಕೆ

ಕಡಬ : ಕೊರೊನಾ ಹಿನ್ನೆಲೆಯಲ್ಲಿ ಹೇರಿದ್ದ ಲಾಕ್‌ಡೌನ್‌ನಿಂದಾಗಿ ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯದಲ್ಲಿ ಭಾರೀ ಇಳಿಕೆ ಕಂಡುಬಂದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು 2020 ಏಪ್ರಿಲ್‌ನಿಂದ 2021 ಮಾರ್ಚ್ 31ರ ವರೆಗೆ ಆರ್ಥಿಕ ವರ್ಷದಲ್ಲಿ 68,94,88,039.17 ರೂ. ಆದಾಯ ಗಳಿಸಿದೆ.

ಕಳೆದ ವರ್ಷ ಮಾರ್ಚ್ 17ರಿಂದ ಸೆ. 8ರ ತನಕ ದೇವಸ್ಥಾನವು ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಪೂರ್ಣ ಬಂದ್ ಆಗಿತ್ತು. ಈ 6 ತಿಂಗಳ ಅವಧಿಯಲ್ಲಿ ಶ್ರೀ ದೇವಸ್ಥಾನಕ್ಕೆ ಯಾವುದೇ ಆದಾಯ ಇರಲಿಲ್ಲ.

ನಂತರ ಸೆ. 15ರಿಂದ ಮಾ. 31ರ ತನಕ ಶ್ರೀ ದೇವಳಕ್ಕೆ ಬಂದ ಆದಾಯ ಇದಾಗಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ತಿಳಿಸಿದ್ದಾರೆ.

Leave A Reply

Your email address will not be published.