ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾಕ್ಕೆ ಬಲಿ

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಹೆಚ್ ಜೆ ರಮೇಶ್ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲ ತಾಣದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ಎಂಟು ವರ್ಷಗಳಿಂದ ರಮೇಶ್ ಅವರು ಸುರೇಶ್ ಕುಮಾರ್ ಅವರ ಆಪ್ತ ಸಹಾಯಕರಾಗಿದ್ದರು. ಈ ಹಿಂದೆ ಕೊರೋನಾ ಸೋಂಕಿತರಾಗಿದ್ದ ಹಲವು ಮಂದಿಯನ್ನು ರಮೇಶ್ ಅವರು ಆಸ್ಪತ್ರೆಗೆ ದಾಖಲಿಸುವಲ್ಲಿ ಮುತುವರ್ಜಿ ವಹಿಸಿದ್ದರು.

ರಮೇಶ್ ಕುಮಾರ್ ಅವರ ನಿಧನಕ್ಕೆ ಸಚಿವ ಸುರೇಶ್ ಕುಮಾರ್ ಕಂಬನಿ ಮಿಡಿದಿದ್ದಾರೆ

Leave A Reply

Your email address will not be published.