1 ರಿಂದ 9ನೇ ತರಗತಿ ಪರೀಕ್ಷೆ ಇಲ್ಲದೆ ಎಲ್ಲರೂ ಪಾಸ್ | ಜುಲೈ 14 ರ ತನಕ ಬೇಸಿಗೆ ರಜಾ
ರಾಜ್ಯದಲ್ಲಿ ಕೊರೋನಾ ಅಬ್ಬರ ಜಾಸ್ತಿ ಆಗುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ 1ರಿಂದ 9ನೇ ತರಗತಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ, 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡುವುದಾಗಿ ಆದೇಶಿಸಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದೆ. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದೆ. ತಜ್ಞರು ಕೂಡ ಇದನ್ನೇ ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿಸಿದೆ.
ಈ ಮೂಲಕ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ಬಾರಿ ಪಾಸ್ ಮಾಡಿದೆ. ಅಷ್ಟೇ ಅಲ್ಲದೆ ಸರಕಾರವು ಬೇಸಿಗೆ ರಜೆ ಘೋಷಿಸಿದ್ದು ಜುಲೈ 14 ರವರೆಗೆ ಬೇಸಿಗೆ ರಜೆ ಇರಲಿದೆ.