ಸಾರಿಗೆ ಮುಷ್ಕರಕ್ಕೆ ಪ್ರಚೋದನೆ ನೀಡಿದ ಆರೋಪ, ಕೋಡಿಹಳ್ಳಿ ಚಂದ್ರಶೇಖರ್ ಸೇರಿ 17 ಮಂದಿ ವಿರುದ್ಧ ಎಫ್ಐಆರ್, 200 ಸಿಬ್ಬಂದಿ ವಜಾ

ಕರ್ನಾಟಕ ಸಾರಿಗೆ ಸಂಸ್ಥೆಯ ಸಿಬ್ಬಂದಿಯನ್ನು ಪ್ರಚೋದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಕರ್ ಸೇರಿದಂತೆ ಒಟ್ಟು 17 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

ಕಾನೂನುಬಾಹಿರವಾಗಿ ಮುಷ್ಕರ ನಡೆಸಿ ಸಂಸ್ಥೆಗೆ ನಷ್ಟವನ್ನುಂಟು ಮಾಡಿದ ಆರೋಪದಡಿ
ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಬಿಎಂಟಿಸಿ ಭದ್ರತಾ ಮುತ್ತು ಜಾಗೃತ ಶಾಖೆಯ ವಿಭಾಗೀಯ ಭದ್ರತಾ ನಿರೀಕ್ಷಕ ಕೆಎಂ ಮುನಿಕೃಷ್ಣ ಅವರು ದೂರು ದಾಖಲಿಸಿದ್ದಾರೆ. 

ಹಲವು ಕಾಯ್ದೆಗಳ ಅಡಿಯಲ್ಲಿ ದೂರು ನೀಡಿದ್ದು, ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ, ಅಕ್ರಮ ಕೂಟ, ಜೀವ ಬೆದರಿಕೆ, ಸಾರ್ವಜನಿಕ ಆಸ್ತಿ ಪಾಸಿಗೆ ಹಾನಿ, ಅಪರಾಧಕ್ಕೆ ಕುಮ್ಮಕ್ಕು, ಕರ್ತವ್ಯಕ್ಕೆ ಅಡ್ಡಿ ಆರೋಪಡಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಅದರ ಜತೆಗೇ ಇಂದು ಕೂಡ ಕರ್ತವ್ಯಕ್ಕೆ ಹಾಜರಾಗದ 200 ಮಂದಿ ಸಾರಿಗೆ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. 

Leave A Reply

Your email address will not be published.