ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ಬ್ರಹ್ಮಕಲಶಕ್ಕೆ ಸಿದ್ದತೆ ಆರೋಪ : ಸೋಮೇಶ್ವರ ದೇವಸ್ಥಾನದ ಆಡಳಿತ ಸಮಿತಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಉಳ್ಳಾಲದ ಸೋಮೇಶ್ವರ ದೇವಸ್ಥಾನದ ಆಡಳಿತ ಸಮಿತಿಯು ಸರ್ಕಾರದ ಆದೇಶ ಉಲ್ಲಂಘಿಸಿ ದೇವಸ್ಥಾನದ ಜಾತ್ರೋತ್ಸವ ಹಾಗೂ ಬ್ರಹ್ಮಕಲಶಕ್ಕೆ ಸಿದ್ದತೆ ನಡೆಸಿದೆ ಎಂಬ ಆರೋಪದ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ವಿರುದ್ದ ಪ್ರಕರಣ ದಾಖಲಾಗಿದೆ.

ಸೋಮೇಶ್ವರ ದೇವಸ್ಥಾನದಲ್ಲಿ ಈಗ ಬ್ರಹ್ಮಕಲಶೋತ್ಸವದ ಸಂಭ್ರಮ ನಡೆಯುತ್ತಿದ್ದು, ಸರ್ಕಾರದ ಆದೇಶ ಪಾಲಿಸಿ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದರು.

ಆದರೆ ದೇವಸ್ಥಾನಕ್ಕೆ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಾವಿರಾರು ಜನರು ಭಾಗಿಯಾಗಿದ್ದರು ಎನ್ನಲಾಗಿದೆ.

ಆದರೆ ಈ ಕುರಿತು ಮುನ್ನೆಚ್ಚರಿಕೆಯಾಗಿ ಮೂರು ದಿನಗಳ ಹಿಂದೆಯೇ ಮಂಗಳೂರು ತಹಶಿಲ್ದಾರ್ ದೇವಸ್ಥಾನಕ್ಕೆ ನೋಟೀಸ್ ನೀಡಿದ್ದರೂ, ಗಣನೆಗೆ ತೆಗೆದುಕೊಳ್ಳದೆ ದೇವಸ್ಥಾನ ಆಡಳಿತ ಸಮಿತಿಯು ಸಾರ್ವಜನಿಕ ಮೆರವಣಿಗೆ ನಡೆಸಿದ್ದಾರೆಂದು ಆರೋಪ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ದೇವಸ್ಥಾನ ಆಡಳಿತ ಸಮಿತಿಯ ವಿರುದ್ಧ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ, ಐಪಿಸಿ ಸೆಕ್ಷನ್ 269ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.