ಪಾಕಿಸ್ತಾನದಿಂದ ಗಡಿ ಹಾರಿ ಭಾರತಕ್ಕೆ ಬಂದ ಈ ವಿಶಿಷ್ಟ ಆಗಂತುಕಳನ್ನು ಬಂಧಿಸುವಂತೆ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಒತ್ತಾಯ | ಯಾರಾಕೆ ?!

ಪಾಕಿಸ್ತಾನದಿಂದ ಓರ್ವ ವಿಶಿಷ್ಟ ಆಗಂತುಕಳೊಬ್ಬಳ ಆಗಮನವಾಗಿದೆ. ಗಡಿ ದಾಟಿ, ಮಿಲಿಟರಿ ಸರ್ಪಗಾವಲನ್ನೂ ಹಾಯ್ದು ಆತ ಬೇಲಿ ಹಾರಿ ಬಂದಿದ್ದಾಳೆ. ಈಗ ಆಕೆಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಗಡಿ ಭದ್ರತಾ ಪಡೆ ಬಿಎಸ್ ಎಫ್ ಒತ್ತಾಯ ಮಾಡುತ್ತಿದೆ.

ಈ ರೀತಿ ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಒಳನುಸುಳಿದವನು ಬೇರಾರೂ ಅಲ್ಲ, ಆಕೆ ಓರ್ವ ಪಾರಿವಾಳ !
ಪಾಕಿಸ್ತಾನದಿಂದ ಭಾರತದೊಳಗೆ ಗಡಿ ದಾಟಿ ಬಂದಿರುವ ಈ  ಪಾರಿವಾಳದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಆ ಆರೋಪದ ಮೇರೆಗೆ ಎಫ್ ಐಆರ್ ದಾಖಲಿಸುವಂತೆ ಬಿಎಸ್ ಎಫ್ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಅಲ್ಲದೆ ಈ ಬಗ್ಗೆ ಪಂಜಾಬ್ ಪೊಲೀಸ್ ಇಲಾಖೆಯ ಅಭಿಪ್ರಾಯ ಕೋರಿದ್ದಾರೆ.

ಕಳೆದ ಶನಿವಾರ ಇಲ್ಲಿನ ರೊರಾವಾಲಾ ಪೋಸ್ಟ್‌ನಲ್ಲಿರುವ ಗಡಿ ಭದ್ರತಾ ಪಡೆಯ ಜವಾನನ ಭುಜದ ಮೇಲೆ ಶಂಕಿತ ಪಾರಿವಾಳವೊಂದು ತಾನೇ ತಾನಾಗಿ ಬಂದು ಕೂತಿದೆ.  ಈ ಪಾರಿವಾಳದ ಕಾಲಿನಲ್ಲಿ ಸಣ್ಣ ಪೇಪರ್ ತುಂಡನ್ನು ಕಟ್ಟಲಾಗಿತ್ತು. ಈ ಪೇಪರ್ ನಲ್ಲಿ ಕೆಲ ಸಂಪರ್ಕ ಸಂಖ್ಯೆಗಳನ್ನು ನಮೂದಿಸಲಾಗಿತ್ತು.  ಈ ಪಾರಿವಾಳ ಗಡಿಯುದ್ದಕ್ಕೂ ಹಾರಾಟ ನಡೆಸಿತ್ತು. ಹೀಗಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಎಸ್ಎಫ್ ಸಿಬ್ಬಂದಿ ಲಿಖಿತ ಬೇಡಿಕೆಯೊಂದಿಗೆ ಪಕ್ಷಿಯನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಧ್ರುವ್ ದಹಿಯಾ ಅವರು ಮಾತನಾಡಿ, ಬಿಎಸ್ಎಫ್ ಪಾರಿವಾಳದ ವಿರುದ್ಧ ಎಫ್ಐಆರ್ ನೋಂದಾಯಿಸಲು ಒತ್ತಾಯಿಸಲಾಗಿದೆ. ಪಾರಿವಾಳವು ಪಕ್ಷಿಯಾಗಿರುವುದರಿಂದ, ಅದರ ವಿರುದ್ಧ ಎಫ್‌ಐಆರ್ ದಾಖಲಿಸಬಹುದು ಎಂದು ನಾನು ಭಾವಿಸುವುದಿಲ್ಲ. ಆದರೆ ಗಡಿಯ ಭದ್ರತೆ ಮತ್ತು ದೇಶ ರಕ್ಷಣೆ ಮಹತ್ವದ ಅವರ ಅಭಿಪ್ರಾಯಕ್ಕಾಗಿ ನಾವು ಈ ವಿಷಯವನ್ನು ನಮ್ಮ ಕಾನೂನು ತಜ್ಞರಿಗೆ ಹಸ್ತಾಂತರಿಸಿದ್ದೇವೆ ಎಂದು ಅವರು ಬುಧವಾರ ಹೇಳಿದರು. ಪಾರಿವಾಳದ ಕಾಲಿಗೆ ಟ್ಯಾಗ್ ಮಾಡಲಾದ ಸಂಖ್ಯೆಯನ್ನು ತಜ್ಞರು ವಿಶ್ಲೇಷಿಸುತ್ತಿದ್ದು, ಇದು ಗೂಢಚರ್ಯೆ ಯತ್ನವಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Leave A Reply

Your email address will not be published.