ಶೀರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ  ದಿ.ಶ್ರೀ ಲಕ್ಷ್ಮಿವರ ತೀರ್ಥರ ಸಹೋದರನಿಂದ ಆಕ್ಷೇಪ

       

ಉಡುಪಿ: ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಸಹೋದರನಿಂದ ಆಕ್ಷೇಪ ವ್ಯಕ್ತವಾಗಿದೆ.

ರಾಮನವಮಿಯಂದು ನೂತನ ಪೀಠಾಧಿಪತಿ ನೇಮಕ ದ್ವಂದ್ವ ಮಠವಾದ ಸೋದೆ ಮಠಾಧೀಶರಿಂದ ಘೋಷಣೆಯಾಗಲಿದ್ದು, ಇದಕ್ಕೆ ಶ್ರೀ ಲಕ್ಷ್ಮಿವರ ತೀರ್ಥರ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ ಅವರುವ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜುಲೈ 19, 2018 ರಂದು ಸಂಶಯಾಸ್ಪದ ರೀತಿಯಲ್ಲಿ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿ ನಿಧನರಾಗಿದ್ದಾರೆ. ಸದ್ಯ ಉಡುಪಿಯ ಶಿರೂರು ಮಠ ಸೋದೆ ಮಠದ ನಿರ್ವಹಣೆಯಲ್ಲಿದೆ.ಮಠದ ವ್ಯವಹಾರ, ಆಸ್ತಿಪಾಸ್ತಿ, ತೆರಿಗೆ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲ. ಈ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.

ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಪೀಠಾಧಿಪತಿ ನೇಮಕ ಸರಿಯಲ್ಲ ಎಂದಿರುವ ಸಹೋದರ ಲಾತವ್ಯ ಆಚಾರ್ಯ, ಎಳೆಯ ವಯಸ್ಸಿನ ವಟುವನ್ನು ಬುಧವಾರ ಘೋಷಣೆ ಮಾಡುತ್ತಿದ್ದಾರೆ. ಕನಿಷ್ಠ ಹತ್ತು ವರ್ಷದ ವೇದ ಅಧ್ಯಯನ ಮಾಡಿದವರನ್ನು ಪೀಠಾಧಿಪತಿ ಮಾಡಬೇಕು.ನೂತನ ಪೀಠಾಧಿಪತಿ ನೇಮಕಕ್ಕೆ ನಮ್ಮ ಸಮ್ಮತಿ ಇಲ್ಲ.

ಈ ಬಗ್ಗೆ ಅಷ್ಟ ಮಠಾಧೀಶರ ಗಮನಕ್ಕೂ ತಂದಿದ್ದೇವೆ ಎಂದು ಕೀರ್ತಿಶೇಷ ಶಿರೂರು ಶ್ರೀಗಳ ಸಹೋದರ ಲಾತವ್ಯ ಆಚಾರ್ಯ ಉಡುಪಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.