ಉಡುಪಿ : ಶೀರೂರು ಮಠಕ್ಕೆ ಉತ್ತರಾಧಿಕಾರಿಯಾಗಿ ಧರ್ಮಸ್ಥಳದ ಅನಿರುದ್ದ ಆಯ್ಕೆ | ಮೇ.14ರಂದು ಪಟ್ಟಾಭಿಷೇಕ

Share the Article

ಅಷ್ಟಮಠಗಳಲ್ಲಿ ಒಂದಾದ ಉಡುಪಿಯ ಶೀರೂರು ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ. ಅನಿರುದ್ಧ ಎಂಬ ವಟುವನ್ನು ಮಠದ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದು, ಮೇ 14ರಂದು ಪಟ್ಟಾಭಿಷೇಕ ನಡೆಯಲಿದೆ.

ಶೀರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಉತ್ತರಾಧಿಕಾರಿಯಾಗಿ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಡಾ|| ಎಂ.ಉದಯ್ ಕುಮಾರ್ ಸರಳತ್ತಾಯ ಮತ್ತು ಶ್ರೀವಿದ್ಯಾ ದಂಪತಿಯ ಪುತ್ರ ಅನುರುದ್ಧ ಎಂಬ ವಟುವನ್ನು ಆಯ್ಕೆ ಮಾಡಲಾಗಿದೆ.

ಶಿರಸಿ ಬಳಿಯಿರುವ ಸೋಂದೆ ಮೂಲ ಮಠದಲ್ಲಿ ಮೇ11ರಿಂದ 14ರವರೆಗೆ ಸನ್ಯಾಸ ಸ್ವೀಕಾರ, ಪಟ್ಟಾಭಿಷೇಕ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ.

Leave A Reply

Your email address will not be published.